ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಲತಾ ಚಂದು ಚವ್ಹಾನ್ (18) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ವಿಜಯಪುರ ತಾಲೂಕಿನ ಹಂಚಿ ನಾಳ ತಾಂಡ ನಿವಾಸಿ ಆಗಿರೋ ಲತಾ ಫೇಸ್ ಬುಕ್ ಲೈವ್ ಬಂದು ತನ್ನ ಸಾವಿಗೆ ಕಾರಣ ತಿಳಿಸಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ತಮ್ಮ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಅನ್ನೋದು ಲತಾ ಆರೋಪ. ಸದ್ಯ ಪ್ರಾಣಾಪಾಯದಿಂದ ಪಾರಾಗಿರೋ ಈಕೆ ವಿಜಯಪುರ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.