ಎಚ್ 1 ಎನ್ 1 ಸೋಂಕು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಹಂದಿಜ್ವರ ಅಂತ ಇದನ್ನು ಕರೀತಾರೆ.
ಜನವರಿಯಿಂದ ಈವರೆಗೂ ಒಟ್ಟು 242 ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಸೆಪ್ಟೆಂಬರ್ 1ರಿಂದ 21ರವರೆಗೆ 21 ದಿನದಲ್ಲಿ 102 ಎಚ್1ಎನ್1 ಪ್ರಕರಣಗಳು ದೃಢಪಟ್ಟಿದ್ದವು. ಬಳಿಕ ಒಂಬತ್ತು ದಿನಗಳಲ್ಲೇ 102 ಪ್ರಕರಣಗಳು ಖಚಿತಪಟ್ಟಿವೆ.
ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ಉಸಿರಾಟದ ತೊಂದರೆ, ತೀವ್ರವಾದ ಮೈ-ಕೈ ನೋವು ಕಾಣಿಸಿಕೊಳ್ಳುತ್ತದೆ ಈ ಲಕ್ಷಣ ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಮುಂಜಾಗ್ರತೆಯಾಗಿ ಸೋಂಕುಪೀಡಿತರಿಂದ ದೂರವಿರಿ . ಶಂಕಿತ ರೋಗಿಯನ್ನು ಪ್ರತ್ಯೇಕವಾಗಿ ಆರೈಕೆ ಮಾಡಿ. ವೈಯಕ್ತಿಕ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ. ಕೆಮ್ಮುವಾಗ, ಸೀನುವಾಗ ಕರವಸ್ತ್ರಗಳನ್ನು ಬಳಸಿ.
ಪೌಷ್ಟಿಕ ಹಾಗೂ ಶುಚಿಯಾದ ತಾಜಾ ಆಹಾರ ಸೇವಿಸಿ. ಚೆನ್ನಾಗಿ ನಿದ್ರಿಸಿ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಸೀನುವುದು ಮಾಡಬೇಡಿ.
ಮನೆ ಹಾಗೂ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ. ಜನಸಂದಣಿ ಇರುವ ಕಡೆ ಮಾಸ್ಕ್ ಧರಿಸುವುದು ಸೂಕ್ತ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.