2019 ರ ಲೋಕಸಭಾ ಚುನಾವಣೆ ಹತ್ತಿರ ಬಂದಿದೆ. ಇನ್ನು ಹೆಚ್ಚೆಂದರೆ 6 ತಿಂಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ. ಹೀಗಿರುವಾಗ ಕರ್ನಾಟಕದ 3 ಲೋಕಸಭಾ ಸ್ಥಾನಗಳಿಗೆ ಉಪ ಚುನಾವಣೆ ಪ್ರಕಟವಾಗಿದೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ರಾಜ್ಯ ಕಾಂಗ್ರೆಸ್ ನಾಯಕರು ಈ ಚುನಾಚಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ 6 ತಿಂಗಳಿರುವಾಗ ಉಪಚುನಾವಣೆ ನಡೆಸುವುದೇನಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.