ದುನಿಯಾ ರಶ್ಮಿ ಮನೆ ಮೇಲಿಂದ ಬಿದ್ದು ಫೋಟೋಗ್ರಾಫರ್ ಸಾವು

Date:

ದುನಿಯಾ ಸಿನಿಮಾಸ ನಟಿ ರಶ್ಮಿ ಅವರ ಮನೆ ಮೇಲಿಂದ ಬಿದ್ದು ಫೋಟೋಗ್ರಾಫರ್ ಸಾವನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

ಪ್ರತೀಕ್(25) ಮೃತ ಫೋಟೋಗ್ರಾಫರ್. ಇವರು, ರಶ್ಮಿ ಮನೆಯಲ್ಲಿ ನಡೆಯುವ ಕಾರ್ಯಕ್ರಮಗಳ ಫೋಟೋಶೂಟ್ ಮಾಡುತ್ತಿದ್ದನು. ಆದರೆ ಇದ್ದಕ್ಕಿದ್ದಂತೆ ಪ್ರತೀಕ್ ರಶ್ಮಿ ಅವರ ಮನೆಯ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ.
ರಶ್ಮಿ ಸಹೋದರ ಅರುಣ್ ಹಾಗೂ ಪ್ರತೀಕ್ ಗೆಳೆಯರಾಗಿದ್ದರು. ಪ್ರತೀಕ್ ಭಾನುವಾರ ರಾತ್ರಿ ರಶ್ಮಿ ಮನೆಯಲ್ಲಿ ನಡೆದ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ರಶ್ಮಿ ತಮ್ಮ ಅರುಣ್ ಹಾಗೂ ಪ್ರತೀಕ್ ಟೆರೆಸ್ ಮೇಲೆ ಹೋಗಿ ಮದ್ಯಪಾನ ಪಾರ್ಟಿ ಮಾಡಿದ್ದಾರೆ.


ಈ ವೇಳೆ ಎಣ್ಣೆ ಮತ್ತಿನಲ್ಲಿ ಪ್ರತೀಕ್ ಮನೆ ಮೇಲಿಂದ ಬಿದ್ದಿದ್ದಾನೆ. ತಕ್ಷಣ ಅವನನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲಿ ಪ್ರತೀಕ್ ಸಾವನ್ನಪ್ಪಿದ್ದಾನೆ. ಈ ಘಟನೆ ಸಂಬಂಧ ಪ್ರತೀಕ್ ಪೋಷಕರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ರಶ್ಮಿ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಗಲಕೋಟೆ, ಮಾ. 22: ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್...

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22:...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...