ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಇವರು ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದರು. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೂ ಆಗಮಿಸಲಿದ್ದಾರೆ.