ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಹಾಗೂ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಭಾನುವಾರ ನಿಶ್ಚಿತಾರ್ಥ ಮಾಡಿಕೊಂಡರು. ಬನಶಂಕರಿಯ ಆಂಜನೇಯನ ಸನ್ನಿಧಿಯಲ್ಲಿ, ಹಸಿರು ಮಂಟಪದಲ್ಲಿ 21 ಲಕ್ಷದ ವಜ್ರದ ಉಂಗುರವನ್ನು ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇನ್ನು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿಶ್ಚಿತಾರ್ಥ ನಡೆದ ಬೆನ್ನಲ್ಲೇ ಧ್ರುವ ಮತ್ತು ಪ್ರೇರಣಾ ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಗುರು–ಹಿರಿಯರು ಸೇರಿ ಮುಂದಿನ ವರ್ಷ ಏಪ್ರಿಲ್ ಕೊನೆಯ ವಾರದಲ್ಲಿ ಮದುವೆ ಫಿಕ್ಸ್ ಮಾಡಿದ್ದಾರಂತೆ. ಆದರೆ ಇನ್ನೂ ದಿನಾಂಕವನ್ನು ನಿಗದಿ ಮಾಡಿಲ್ಲ ಎಂದು ತಿಳಿದುಬಂದಿದೆ.
ಇನ್ನು ಪವಿತ್ರ ಗೋವುಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದ ಈ ಸಮಾರಂಭದಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು ಭಾಗಿಯಾಗಿದರು.