ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿದ್ದಾರೆ ಒಳ್ಳೆ ಹುಡುಗ ಪ್ರಥಮ್..
ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಮನರಂಜನೆ ನೀಡಿದ ಪರಿ ಇನ್ನು ನೆನಪಿನಲ್ಲಿ ಉಳಿಯುವಂತೆ ಮಾಡಿದೆ. ಒಳ್ಳೆ ಹುಡುಗ ಪ್ರಥಮ್ ಎಂದೇ ಖ್ಯಾತಿಗಳಿಸಿರುವ ಪ್ರಥಮ್ ಕಳೆದ ಸೀಸನ್ ನಲ್ಲಿ ಗೆಸ್ಟ್ ಆಗಿ ಬರುತ್ತಾರೆ ಎಂದು ನಿರೀಕ್ಷಿಸಿದರು. ಆದರೆ ಕಳೆದ ಸೀಸನ್ ನಲ್ಲಿ ನಿರಾಸೆ ಮೂಡಿಸಿದ ಪ್ರಥಮ್, ಸೀಸನ್ 6ರಲ್ಲಿ ಅಭಿಮಾನಿಗಳ ಆಸೆ ಈಡೇರಿಸಲು ಮುಂದಾಗಿದ್ದಾರೆ.ಹೌದು, ಒಳ್ಳೆ ಹುಡುಗ ಪ್ರಥಮ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗುವುದು ಖಚಿತವಾಗಿದೆ. ಇದು ನಿಜ, ಬಿಗ್ ಬಾಸ್ ಫಿನಾಲೆ ಸಮೀಪಿಸುತ್ತಿದ್ದಂತೆ ಮತ್ತಷ್ಟು ಮನರಂಜನೆ ನೀಡಲು ಪ್ರಥಮ್ ಅವರನ್ನು ಮನೆಯೊಳಗೆ ಕಳುಹಿಸಲಾಗುತ್ತಿದೆ. ಒಟ್ಟಿನಲ್ಲಿ ಬಿಗ್ ಬಾಸ್ ಮನೆಯಲ್ಲಿ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷಿಸಬಹುದು.