No menu items!
16.9 C
Munich
Monday, June 15, 2026

ಉಗ್ರರ ದಾಳಿಗೆ 12 ಸಿಆರ್ ಪಿಎಫ್ ಯೋಧರು ಹುತಾತ್ಮ..

Must read

ಉಗ್ರರ ದಾಳಿಗೆ 12 ಸಿಆರ್ ಪಿಎಫ್ ಯೋಧರು ಹುತಾತ್ಮ..

ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಬಾಂಬ್ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪಡೆಯ 18 ಸಿಬ್ಬಂದಿ ಹುತಾತ್ಮರಾಗಿ, ಹಲವರು ಗಾಯಗೊಂಡಿದ್ದಾರೆ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಗುರಿ ಮಾಡಿಕೊಂಡು ಉಗ್ರಗಾಮಿಗಳು ಈ ದಾಳಿ ನಡೆಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪುರ ಸಮೀಪದ ಜಮ್ಮುಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ ಮೇಲೆ ಸುಧಾರಿತ ಸ್ಫೋಟಕ ಸಾಮಾಗ್ರಿಗಳನ್ನು ಬಳಸಿ ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ 12 ಮಂದಿ ಯೋಧರು ಹುತಾತ್ಮರಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಅರ್ ಪಿಎಫ್ ಬೆಟಾಲಿಯನ್ 54ಕ್ಕೆ ಸೇರಿದ್ದಾಗಿತ್ತು. ಈ ಸ್ಫೋಟದ ಹೊಣೆಯನ್ನು ಜೈಷ್ಮೊಹ್ಮದ್ ಹೊತ್ತಿಕೊಂದಿದೆ. ಸ್ಥಳೀಯ ಯುವಕರಿಂದ ನಡೆದ ಫಿದಾಯಿನ್ ದಾಳಿ ಎಂದು ಉಗ್ರ ಸಂಘಟನೆ ಹೇಳಿಕೊಂಡಿದೆ. ಶ್ರೀನಗರ್ ನಿಂದ ಮೂವತ್ತು ಕಿಲೋಮಿಟರ್ ದುರದ ಜಮ್ಮುಶ್ರೀನರ್ ಹೆದ್ದಾರಿಯಲ್ಲಿರುವ ಲೆಥ್ ಪುರ್ ನಲ್ಲಿ ಈ ಘಟನೆ ನಡೆದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article