ಸುತ್ತೂರು ಸ್ವಾಮೀಜಿ ಅವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ ಇಂದು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದಿದ್ದೇನೆ ಮತ್ತು ಶ್ರೀಗಳಿಗೆ ಅಭಿಷೇಕ್ ಅಭಿನಯದ ಅಮರ್ ಚಿತ್ರದ ಟ್ರೈಲರ್ ತೋರಿಸಿದ್ದೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ
ಅಭಿಯಾ ಸಿನಿಮಾದ ಬಗ್ಗೆ ಕೂಡ ಸ್ವಾಮೀಜಿ ಅವರೊಂದಿಗೆ ಮಾತನಾಡಿದ್ದೇನೆ. ಈಗ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ. ಇಂದು ಕೂಡ ಕೆ.ಆರ್.ನಗರಕ್ಕೆ ಭೇಟಿ ನೀಡಲಿದ್ದೇನೆ ಎಂದರು.
ರಾಜಕೀಯ ಬೆಳವಣಿಗೆ ನಿಮಗೆ ಗೊತ್ತಿದೆ. ಹಾಗಾಗಿ ಸದ್ಯಕ್ಕೆ ಏನೂ ಆಗಿಲ್ಲ ಬೆಳವಣಿಗೆ ಇದ್ದರೆ ಮಾತನಾಡುತ್ತೇನೆ.
ಜೆಡಿಎಸ್‌ನಿಂದ ನನ್ನ ಜೊತೆ ಯಾರು ಚರ್ಚೆ ನಡೆಸಿಲ್ಲ ಎಂದು ಮೈಸೂರಿನ ಸುತ್ತೂರಿನಲ್ಲಿ ಸುಮಲತಾ ಅಂಬರೀಶ್ ಹೇಳಿದರು.