ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಧ್ರುವನಾರಾಯಣ್ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ 5 ಸಲ ಗೆಲುವು ಸಾಧಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ.
ನಾನು ಸ್ಪರ್ಧೆ ಮಾಡುವುದಿಲ್ಲ, ನಾನು ಹೇಳಿದವರಿಗೆ ಟಿಕೆಟ್ ನೀಡಿ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದು, ಬಿಜೆಪಿಯಿಂದ ನೀವೇ ಕಣಕ್ಕಿಳಿಯಬೇಕು. ಚುನಾವಣಾ ವೆಚ್ಚವನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಮನವೊಲಿಸುವ ಪ್ರಯತ್ನ ನಡೆಸಲಾಗಿದೆ.
ಧ್ರುವನಾರಾಯಣ 2 ಬಾರಿ ಜಯಗಳಿಸಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಅವರ ಗೆಲುವಿಗೆ ಕಡಿವಾಣ ಹಾಕಲು ಬಿಜೆಪಿ ಮುಂದಾಗಿದೆ. ರಾಜಕೀಯ ಗುರು ಶ್ರೀನಿವಾಸ ಪ್ರಸಾದ್ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಿದೆ ಎಂದು ಹೇಳಲಾಗಿದೆ.