ಜಗತ್ತಿನ ಮೊದಲ ಮಹಿಳಾ ಜಗದ್ಗುರು ಮಾತೆ ಮಹಾದೇವಿ ಅವರು ಲಿಂಗೈಕ್ಯರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಸವ ಧರ್ಮ ಪೀಠದ ಅಧ್ಯಕ್ಷೆಯಾಗಿದ್ದ ಮಾತೆ ಮಹಾದೇವಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.