ಜೆಡಿಎಸ್ ಜತೆ ಮೈತ್ರಿಯಿಂದ ಕಾಂಗ್ರೆಸ್ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ ಎಂಬ ಭಾವ ಕಾಂಗ್ರೆಸ್ ವಲಯದಲ್ಲಿ ಪ್ರಬಲವಾಗತೊಡಗಿದೆ.
ಮಂಡ್ಯ, ತುಮಕೂರು ಮತ್ತು ಬೆಂಗಳೂರು ಉತ್ತರದಂತಹ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಯಾವ ಕಾರಣಕ್ಕೂ ಜೆಡಿಎಸ್‌ಗೆ ಬೆಂಬಲ ನೀಡುವ ಸ್ಥಿತಿಯಲ್ಲಿ ಇಲ್ಲ. ಪಕ್ಷದ ನಾಯಕತ್ವದ ಮಾತಿಗೆ ಬೆಲೆ ಕೊಟ್ಟು ಬೆಂಬಲ ನೀಡಿದರೆ ರಾಜಕೀಯವಾಗಿ ಈ ನಾಯಕರು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಾರೆ.
ಇಂತಹ ನಾಯಕರು ಈಗ ಬಿಜೆಪಿ ಕಡೆ ವಾಲಿದರೆ ಅಂತಿಮವಾಗಿ ಇದು ಕಾಂಗ್ರೆಸ್‌ಗೆ ಭಾರಿ ನಷ್ಟಉಂಟಾಗುತ್ತದೆ. ಇಂತಹ ಪರಿಸ್ಥಿತಿ ನಿರ್ಮಾಣ ಮಾಡಿಕೊಳ್ಳುವುದಕ್ಕಿಂತ ಜೆಡಿಎಸ್ ಜತೆ ಫ್ರೈಂಡ್ಲಿ ಫೈಟ್ ಮಾಡಿದ್ದರೆ ಉತ್ತಮವಿತ್ತು.
ಇದರಿಂದ ಎರಡು ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಬಹುದಿತ್ತು ಮತ್ತು ಬಿಜೆಪಿಗೆ ಅನಗತ್ಯ ಲಾಭ ತಂದುಕೊಡುವುದನ್ನು ತಪ್ಪಿಸಬಹುದಿತ್ತು ಎಂಬ ಭಾವನೆ ಕಾಂಗ್ರೆಸ್ ವಲಯದಲ್ಲಿ ಮೂಡಿದೆ.