ಶಾಕಿಂಗ್ ನ್ಯೂಸ್, 650 ಎಂಎಲ್ ಬಿಯರ್ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ. ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗುತ್ತಿದ್ದಂತೆ ಮದ್ಯ ಪ್ರಿಯರಿಗೆ ದರ ಏರಿಕೆಯ ಬಿಸಿ ತಟ್ಟಿದೆ. ಲೋಕಸಭೆ ಚುನಾವಣೆಯಿಂದಾಗಿ ಭಾರೀ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಹಲವೆಡೆ ಮದ್ಯ ಖರೀದಿಸಿ ದಾಸ್ತನು ಮಾಡಿಕೊಳ್ಳಲಾಗುತ್ತಿದ್ದು, ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದೆ ಎನ್ನಲಾಗಿದೆ.
ಪ್ರತಿ ವರ್ಷ ಸರಾಸರಿ 2,400 ಕೋಟಿ ರೂ. ಆದಾಯ ಅಬಕಾರಿ ಇಲಾಖೆ ಮೂಲಕ ಸರ್ಕಾರದ ಖಜಾನೆ ಸೇರುತ್ತಿದೆ. 10 ವರ್ಷಗಳಲ್ಲಿ ಬಿಯರ್ ಮಾರಾಟ ಪ್ರಮಾಣ 5 ಪಟ್ಟು ಹೆಚ್ಚಾಗಿದೆ. ಹೀಗಾಗಿ 2019-20 ನೇ ಸಾಲಿನಲ್ಲಿ ಸರ್ಕಾರಿ ಅಬಕಾರಿ ಇಲಾಖೆ 2,800 ಕೋಟಿ ರೂ. ಟಾರ್ಗೆಟ್ ನೀಡಿದೆ ಹಾಗಾಗಿ ಬಿಯರ್ ದರ ಏರಿಕೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.