ಕಲಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು, ಮನ್ ಕೀ ಬಾತ್ ಬಿಟ್ಟರೆ ಮೋದಿ ಸಾಧನೆ ಮಾತ್ರ ಶೂನ್ಯ ಎಂದರು.
ಭಾವನಾತ್ಮಕ ವಿಚಾರ ಮಾತನಾಡಿ ಜನರ ಜಾರಿ ತಪ್ಪಿಸುತ್ತಿದ್ದಾರೆ. ಮೋದಿಗೆ ಖರ್ಗೆ ಸಿಂಹಸ್ವಪ್ನವಾಗಿದ್ದಾರೆ. ಹೀಗಾಗಿ ಖರ್ಗೆ ಅವರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದರು.
ಅದೇ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಮಾತನಾಡಿದರೂ ಅವರು ಕಾಂಗ್ರೆಸ್‍ನಿಂದ ಮಾತ್ರ ಎಲ್ಲಾ ವರ್ಗದ ಮತ್ತು ಸಮುದಾಯಗಳ ಜನರ ಹಿತರಕ್ಷಣೆ ಸಾಧ್ಯ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. ಮಧ್ಯಮ ವರ್ಗದವರಿಗೆ ಆದಾಯ ಖಾತ್ರಿ ಯೋಜನೆ ಜಾರಿಗೆ ತರಲಾಗುವುದು. ಉದ್ಯೋಗ ಸೃಷ್ಟಿಸಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಶೈಕ್ಷಣಿಕ ಸಂಸ್ಥೆಗಳನ್ನು ಬಲಪಡಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.