ಹಾಸನದ ಮಾಜಿ ಸಚಿವ ಎ.ಮಂಜು ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಣದ ಮತ್ತೊಬ್ಬ ನಾಯಕ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಕೊಪ್ಪಳದ ಬಸವರಾಜರಾಯರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹರಡಲಾರಂಭಿಸಿವೆ.
ಬಸವರಾಜರಾಯರೆಡ್ಡಿಯವರು ಕಲಬುರಗಿ ಕ್ಷೇತ್ರದಿಂದ ಶಾಸಕರಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದರು.
ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ನಡೆಸಿದ್ದರು. ಪದೇ ಪದೇ ಕಾಂಗ್ರೆಸ್ ಪರವಾಗಿ ಪತ್ರಿಕಾಗೋಷ್ಠಿಗಳನ್ನು ಮಾಡಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸುತ್ತಿದ್ದರು.ಮಾಧ್ಯಮಗಳಲ್ಲೂ ರಾಷ್ಟ್ರೀಯ ವಿಚಾರಗಳೇ ಕುರಿತು ಹೆಚ್ಚು ಮಾತನಾಡುತ್ತಿದ್ದರು.