ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ತಾನೇಕೆ ಪ್ರಚಾರಕ್ಕೆ ಹೋಗಲ್ಲ ಎಂಬುದಕ್ಕೆ ಕಾರಣವನ್ನೂ ನೀಡಿದ್ದಾರೆ. ರಾಜಕೀಯಕ್ಕೆ ಹೋಗಲು ತುಂಬಾನೇ ಬುದ್ಧಿ ಬೇಕು. ನಾನು ಅಷ್ಟೊಂದು ಬುದ್ಧಿವಂತನಲ್ಲ ಎಂಬ ಕಾರಣ ಕೊಟ್ಟಿದ್ದಾರೆ ಶಿವಣ್ಣ.
ಸುಮತಾ ನನ್ನನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿ ಬೆಂಬಲ ಕೋರಿದರೂ ನಾನು ಪ್ರಚಾರಕ್ಕೆ ಹೋಗಲ್ಲ ಎಂದು ಶಿವಣ್ಣ ಕಡ್ಡಿ ಮುರಿದಂತೆ ಹೇಳಿದ್ದಾರೆ.
ತನ್ನ ಸಂಬಂಧಿ ಮಧುಬಂಗಾರಪ್ಪ ಅವರು ಸ್ಪರ್ಧೆ ಮಾಡಿರುವ ಶಿವಮೊಗ್ಗಕ್ಕೂ ಪ್ರಚಾರಕ್ಕೆ ಹೋಗಲಾರೆ ಎಂದಿದ್ದಾರೆ.
ಸುಮಲತಾ ಕರೆದರೂ ನಾನು ಪ್ರಚಾರಕ್ಕೆ ಹೋಗಲ್ಲ ಎಂದ ಹ್ಯಾಟ್ರಿಕ್ ಹೀರೋ! ಕಾರಣ ಏನ್ ಗೊತ್ತಾ?
Date: