ನಾಳೆ ನಿಖಿಲ್ ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಂಡ್ಯಕ್ಕೆ ಬರಬೇಕು ಎಂದು ನಗರದ ಕಾವೇರಿ ನಿವಾಸಕ್ಕೆ ತೆರಳಿ ಅನಿತಾ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ‘ ನಿಖಿಲ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಾಗಲು ಸಾಧ್ಯವಿಲ್ಲ, ಭಾನುವಾರ,ಸೋಮವಾರ ಮೈಸೂರಿನಲ್ಲಿ ಇರುತ್ತೇನೆ, ನಂತರ ಚಿತ್ರದುರ್ಗಕ್ಕೆ ತೆರಳುತ್ತೇನೆ’ ಎಂದರು, ‘ನಿಖಿಲ್ ಪರವಾಗಿ ಪ್ರಚಾರ ಮಾಡಲು ಸಾಧ್ಯವಿಲ್ಲ, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕಾಗಿರುವುದರಿಂದ ಮಂಡ್ಯ ಕ್ಷೇತ್ರಕ್ಕೆ ವೈಯಕ್ತಿಕವಾಗಿ ಭೇಟಿ ನೀಡಲಾಗುವುದಿಲ್ಲ ‘ಎಂದರು.