ದರ್ಶನ್ ಹಾಗೂ ಯಶ್ ಜೋಡೆತ್ತುಗಳಲ್ಲ ಕಳ್ಳ ಎತ್ತುಗಳು ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದು ಜೆಡಿಎಸ್ ವಿರುದ್ಧ ಅಭಿಯಾನ ನಡೆಸಲಾರಂಭಿಸಿದ್ದಾರೆ. ಮಂಡ್ಯದಲ್ಲದೇ ರಾಜ್ಯಾದ್ಯಂತ ಯಾರೂ ಜೆಡಿಎಸ್ಗೆ ಮತ ಹಾಕಬಾರದು ಎಂದು ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಜೆಡಿಎಸ್ಗೆ ಮತಹಾಕದಂತೆ ಫೇಸ್ಬುಕ್ನಲ್ಲಿ ಪೋಸ್ಟ್ಗಳನ್ನು ಮಾಡಿ ಅಭಿಯಾನವನ್ನೇ ನಡೆಸುತ್ತಿದ್ದಾರೆ. ಎಲ್ಲಿಯೂ ಜೆಡಿಎಸ್ಗೆ ಮತ ಹಾಕಬಾರದು ಎಂದು ದರ್ಶನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದದಲ್ಲಿ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದಾರೆ. ಅವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿದ್ದಾರೆ. ಬಿಜೆಪಿ ಸುಮಲತಾ ಅವರಿಗೆ ತನ್ನ ಬೆಂಬಲ ನೀಡಿದೆ. ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸುಮಲತಾ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ನಿಖಿಲ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಿದೆ. ದರ್ಶನ್ ಅಭಿಮಾನಿಗಳು ಈಗ ಕುಮಾರಸ್ವಾಮಿ ಹಾಗೂ ಜೆಡಿಎಸ್ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ದರ್ಶನ್ -ಯಶ್ ಜೋಡೆತ್ತುಗಳಲ್ಲ ಕಳ್ಳ ಎತ್ತುಗಳು ಎಂದ ಕುಮಾರಸ್ವಾಮಿ ವಿರುದ್ಧ ಡಿ.ಬಾಸ್ ಫ್ಯಾನ್ಸ್ ರಣಕಹಳೆ!
Date: