ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತನಗೆ ಬೆದರಿಕೆ ಇದೆ, ರಕ್ಷಣೆ ಇಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಂಡ್ಯದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆಡಳಿತ ಯಂತ್ರದ ದುರುಪಯೋಗವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸುಮಲತಾ ದೂರಿದ್ದಾರೆ.
ಆಡಳಿತ ಯಂತ್ರ ದುರುಪಯೋಗ ಆಗುತ್ತಿದ್ದು, ನನಗೆ ಬೆದರಿಕೆ ಇದೆ. ರಕ್ಷಣೆ ಇಲ್ಲದಂತಾಗಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗ್ತಿದೆ. ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿರುವ ಸುಮಲತಾ ಹೆಚ್ಚಿನ ಭದ್ರತೆ ಕೋರಿದ್ದಾರೆ. ನಾಮಪತ್ರ ಸಲ್ಲಿಕೆಗೆ ಹಣಕೊಟ್ಟು ಜನರನ್ನು ಕರೆಸಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಮತ್ತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಸ್ಪರ್ಧೆ ಇದೆ. ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅವರಿಗೆ ಮೈತ್ರಿ ಧರ್ಮದ ಹೆಸರಲ್ಲಿ ಕಾಂಗ್ರೆಸ್ ಕೈ ಕೊಟ್ಟಿತು. ಆದ್ದರಿಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಸುಮಲತಾ ಅವರಿ ದರ್ಶನ್, ಯಶ್ ಸೇರಿದಂತೆ ಚಿತ್ರರಂಗದ ಬೆಂಬಲ ಕೂಡ ಸಿಕ್ಕಿದೆ.
ಬೆದರಿಕೆಯಿದೆ, ರಕ್ಷಣೆ ಇಲ್ಲದಂತಾಗಿದೆ ಎಂದು ದೂರು ನೀಡಿದ ಸುಮಲತಾ
Date: