ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದಿಂದ ಮೂವರು ಕಣದಲ್ಲಿದ್ದಾರೆ.
ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಹಾಸನವನ್ನು ಬಿಟ್ಟುಕೊಟ್ಟ ದೇವೇಗೌಡರು ತುಮಕೂರಿನಿಂದ ಅಖಾಡಕ್ಕೆ ಇಳಿದಿದ್ದಾರೆ. ದೇವೇಗೌಡರು ಮತ್ತೊಬ್ಬ ಮೊಮ್ಮಗ , ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಗ ನಿಖಿಲ್‌ಕುಮಾರಸ್ವಾಮಿ ಮಂಡ್ಯದಿಂದ ರಾಜಕೀಯಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ.
ಪ್ರಜ್ವಲ್ ರೇವಣ್ಣ ಈಗಾಗಲೇ ಹಾಸನದಲ್ಲಿ ನಾಮಪತ್ರ ಸಲ್ಲಿಸಿದ್ದರು. ಇವತ್ತು ದೇವೇಗೌಡರು ತುಮಕೂರಲ್ಲಿ, ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ದೇವೇಗೌಡರ ಎದುರು ತುಮಕೂರಿನ ಹಾಲಿ ಸಂಸದ ಮುದ್ದಹನುಮೇಗೌಡರು ತೊಡೆ ತಟ್ಟಿ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ್ ಕಣದಲ್ಲಿದ್ದಾರೆ.
ಹಾಸನದಲ್ಲಿ ಪ್ರಜ್ವಲ್ ಗೆ ಬಿಜೆಪಿ ಅಭ್ಯರ್ಥಿ ಎ. ಮಂಜು ಸವಾಲಾಗಿದ್ದಾರೆ. ಮಂಡ್ಯದಲ್ಲಿ ನಿಖಿಲ್ ಗೆ ಸುಮಲತಾ ಅವರ ಸ್ಪರ್ಧೆ ತಲೆನೋವಾಗಿದೆ.
ತಾತ, ಮೊಮ್ಮಗ ಅಧಿಕೃತವಾಗಿ ಅಖಾಡಕ್ಕೆ!
Date: