ಲೋಕಸಭಾ ಚುನಾವಣೆಗೆ ದಿನಗಳನ್ನು ಆರಂಭವಾಗಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದು, ಈ ಕುರಿತು ಈಗಾಗಲೇ ಮಾತುಕತೆ ನಡೆದಿದೆ ಎಂದು ರಮೇಶ್ ಜಿಗಜಿಣಗಿ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರಿಗೆ ಬೆಂಬಲ ನೀಡಿದ್ದು, ಈಗ ರಮೇಶ್ ಜಿಗಜಿಣಗಿ ಅವರ ಹೇಳಿಕೆಯಿಂದಾಗಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆಂಬ ವದಂತಿಗೆ ಪುಷ್ಟಿ ನೀಡಿದೆ.
ತಮ್ಮ ನಿವಾಸದ ಮೇಲೆ ಐಟಿ ದಾಳಿ ನಡೆದಿರುವುದರ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಕೈವಾಡವಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಆರೋಪಿಸಿದ್ದರ ಮಧ್ಯೆ ಈಗ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕುರಿತು ರಮೇಶ್ ಜಿಗಜಿಣಗಿ ನೀಡಿರುವ ಹೇಳಿಕೆ ಮತ್ತಷ್ಟು ಮಹತ್ವ ಪಡೆದಿದೆ.