ಮಂಡ್ಯ ಲೋಕಸಭಾ ಕ್ಷೇತ್ರದ ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಫುಲ್ ಗರಂ ಆಗಿರುವುದು ಎಲ್ಲರಿಗೂ ತಿಳಿದಿರುವ ಓಪನ್ ಸೀಕ್ರೇಟ್. ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಸುಮಲತಾ ಆರೋಪಿಸಿದ್ದರು.
ಇದರ ಬೆನ್ನಲ್ಲೇ ಬಿಎಸ್ಪಿ ಅಭ್ಯರ್ಥಿ ನಂಜುಂಡಸ್ವಾಮಿ ಅವರು ಜಿಲ್ಲಾಧಿಕಾರಿ ಮತ್ತು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಯವರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ನನಗೆ ಎವಿಎಂ ನಲ್ಲಿ 1ನೇ ಕ್ರಮ ಸಂಖ್ಯೆ ನೀಡಬೇಕಿತ್ತು. ಆದರೆ ಗೋಲ್ ಮಾಲ್ ಮಾಡಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರ್ ಅವರಿಗೆ ನೀಡಿದ್ದಾರೆ ಎಂದು ನಂಜುಂಡಸ್ವಾಮಿ ಕೆಂಡಾಮಂಡಲರಾಗಿದ್ದಾರೆ.
ಡಿಸಿಯನ್ನು ಟ್ರಾನ್ಸ್ಫರ್ ಮಾಡುವಂತೆ ಸುಮಲತಾ ಅವರ ಚುನಾವಣಾ ಏಜೆಂಟ್ ಮದನ್ ಅವರು ದೂರು ನೀಡಿದ್ದಾರೆ. ಅದೇರೀತಿ ನಂಜುಂಡಸ್ವಾಮಿ ಅವರು ಸಹ ಜಿಲ್ಲಾಧಿಕಾರಿ ವಿರುದ್ಧ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದ್ದಾರೆ.