ಯಶ್ ಪ್ರಚಾರದ ವೇಳೆ ವಾಹನ ತಡೆದು ಪ್ರತಿಭಟನೆ !?

Date:

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರ ವಾಹನ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಶ್ರೀರಂಗಪಟ್ಟಣ ಸಮೀಪದ ಚಿನ್ನೇನಹಳ್ಳಿ ಗ್ರಾಮಸ್ಥರು ನಮ್ಮ ಊರಿಗೆ ಪ್ರಚಾರಕ್ಕೆ ಬನ್ನಿ ಎಂದು ಸಬ್ಬನಕುಪ್ಪೆ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ನಿಗದಿಯಾಗಿರುವಂತೆ ಯಶ್ ಇಂದು ಚಿನ್ನೇನಹಳ್ಳಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಬೇಕಿತ್ತು. ಆದರೆ, ಸಮಯದ ಅಭಾವದ ಕಾರಣ, ಅವರು ಮುಂದೆ ಸಾಗಿದ್ದು, ನಮ್ಮ ಊರಿಗೆ ಪ್ರಚಾರಕ್ಕೆ ಬನ್ನಿ ಎಂದು ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಅಂಬರೀಶ್ ಅವರು ನಮ್ಮ ಊರಿಗೆ ಪ್ರಚಾರಕ್ಕೆ ಬಂದಿದ್ದರು. ನೀವು ಪ್ರಚಾರಕ್ಕೆ ಬನ್ನಿ ಎಂದು ಹೇಳಿದ್ದಾರೆ. ಪ್ರತಿಭಟನೆ ನಡೆಸಿದವರನ್ನು ಸಮಾಧಾನಪಡಿಸಿದ ಯಶ್ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ.ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...