ಪೊಲೀಸರ ವಶದಲ್ಲಿದ್ದ ಆರೋಪಿ ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕೊಲೆ ಆರೋಪಿ ರಾಜೇಂದ್ರ ಅಲಿಯಾಸ್ ಬೆಂಕಿ ರಾಜ ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿತ್ತು. ಆತನನ್ನು ನೋಡಿಕೊಳ್ಳಲು ನೇಮಕ ಮಾಡಲಾಗಿದ್ದ ಪೊಲೀಸರು ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಅಮಾನತು ಮಾಡಿ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 23 ರಂದು ಕುಮಾರಸ್ವಾಮಿ ಲೇ ಔಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಕಿ ರಾಜನನ್ನು ಕೋಣನಕುಂಟೆ ಬಳಿ ಫೈರಿಂಗ್ ಮಾಡಿ ಪೊಲೀಸ್ ವಶಕ್ಕೆ ಪಡೆಯಲಾಗಿತ್ತು.