ಸ್ಯಾಂಡಲ್ ವುಡ್ ನ ಡಿ.ಬಾಸ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಲ್ಲಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿದ್ದಾರೆ.
ಅದಲ್ಲದೆ ಬಿಜೆಪಿ ಅಭ್ಯರ್ಥಿಯೊಬ್ಬರ ಪರವೂ ದರ್ಶನ್ ಅಖಾಡಕ್ಕೆ ಇಳಿದಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಪಿ.ಸಿ ಮೋಹನ್ ಅವರ ಪರವೂ ಪ್ರಚಾರ ನಡೆಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ದರ್ಶನ್ ಇಂದು ಪ್ರಚಾರ ಮಾಡಿದ್ರು. ದರ್ಶನ್ ಪಕ್ಷಬೇಧವಿಲ್ಲದೆ ಈ ಹಿಂದೆಯೂ ಅನೇಕರ ಪರವಾಗಿ ಪ್ರಚಾರ ಮಾಡಿದ್ದಾರೆ.
ದರ್ಶನ್, ಯಶ್ ಮಂಡ್ಯದಲ್ಲಿ ಸುಮಲತಾ ಗೆಲುವಿಗೆ ಹಗಲಿರುಳು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಸುಮಲತಾ ಅವರ ಜೊತೆ ಬಿಜೆಪಿ ಅಭ್ಯರ್ಥಿ ಪರವೂ ದರ್ಶನ್ ಪ್ರಚಾರ..!
Date: