ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುದೇವನಹಳ್ಳಿಯಲ್ಲಿ ನಡೆದಿದೆ.
ನಿನ್ನೆ ಗುರುದೇವನಹಳ್ಳಿಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಗುಂಪೊಂದು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಘಟನೆಗೆ ಯಾರು ಜವಾಬ್ದಾರಿ ಎಂದು ಬೇಸರ ವ್ಯಕ್ತಪಡಿಸಿದ ಅವರು, ತಾಳ್ಮೆಯಿಂದ ಇದ್ದು ಶಾಂತಿಯುತವಾಗಿ ಚುನಾವಣೆ ನಡೆಯಬೇಕೆಂಬುದು ನಮ್ಮ ಅಪೇಕ್ಷೆ.
ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ ಎಂದರು. ಪ್ರಸ್ತುತ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ನಾವು ಏನೇ ಮಾಡಿದರೂ ತಪ್ಪಾಗುತ್ತದೆ ಎಂದು ಗಾಯಾಳುಗಳಿಗೆ ಸಮಾಧಾನ ಹೇಳಿದರು.
ಆರೋಗ್ಯ ವಿಚಾರಿಸಿದ ನಿಖಿಲ್ : ಇನ್ನು ಘಟನೆ ನಡೆದ ಬಗ್ಗೆ ಮಾಹಿತಿ ಪಡೆದುಕೊಂಡ ಕೂಡಲೇ ಆಸ್ಪತ್ರೆಗೆ ಆಗಮಿಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿ ತನಿಖೆಗೆ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಭಾರತೀನಗರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.