ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಲ್ಲ. ಅವರ ವಿರುದ್ಧ ದೂರು ನೀಡಿ ಶಾಕ್ ಕೊಟ್ಟಿದ್ದಾರೆ.
ಮುಖ್ಯಮಂತ್ರಿಗಳು ಕೆಲಸಕ್ಕೆ ಅಡ್ಡಿ ಪಡಿಸ್ತಾ ಇದ್ದಾರೆ ಎನ್ನುವುದು ಐಟಿ ಅಧಿಕಾರಿಗಳ ಆರೋಪ. ಮಂಡ್ಯ, ಹಾಸನ, ಮೈಸೂರು ಮೊದಲಾದ ಕಡೆ ನಾವು ದಾಳಿ ನಡೆಸಿದ ಸಂದರ್ಭದಲ್ಲಿ ಸಿಎಂ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 143,149, 504, 505, 506,186,187,189ರ ಅಡಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳು ಆಗ್ರಹಿಸಿದ್ದಾರೆ.
ಕುಮಾರಸ್ವಾಮಿ ಅವರಲ್ಲದೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಹ ದೂರು ನೀಡಿದ್ದಾರೆ.
ಎಲೆಕ್ಷನ್ ಟೈಮ್ ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಐಟಿಯಿಂದ ಬಿಗ್ ಶಾಕ್..!
Date: