ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಪರವಾಗಿ ಪ್ರಚಾರ ನಡೆಸಿದ ಸಿದ್ದರಾಮಯ್ಯ, ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಬೇಡಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್, ಮಂಡ್ಯ ಕ್ಷೇತ್ರಕ್ಕೆ ಸಿದ್ದರಾಮಯ್ಯ ಮನಃಪೂರ್ವಕವಾಗಿ ಪ್ರಚಾರಕ್ಕೆ ಬಂದಿಲ್ಲ ಅವರನ್ನು ಕಟ್ಟಿಹಾಕಿ ಕರೆದುಕೊಂಡು ಬರಲಾಗಿದೆ ಎಂದು ಹೇಳಿದ್ದಾರೆ.
ಮಂಡ್ಯ ಪ್ರಚಾರಕ್ಕೆ ಬರದಿದ್ದರೆ ಮೈಸೂರಿನಲ್ಲಿ ಅವರು ಪ್ರಚಾರಕ್ಕೆ ಬರದಿರಬಹುದು ಎಂಬ ಜೆಡಿಎಸ್ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದಿದ್ದಾರೆ.ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಅವರು ಮುಕ್ತ ಮನಸ್ಸಿನಿಂದ ಹೇಳಿಲ್ಲ. ಒತ್ತಡದಿಂದ ಹೇಳಿದ್ದಾರೆ. ಕಟ್ಟಿಹಾಕಿ ಅವರನ್ನು ಪ್ರಚಾರಕ್ಕೆ ಕರೆ ತರಲಾಗಿದೆ ಎಂದು ಸುಮಲತಾ ಹೇಳಿದ್ದಾರೆ.