ನೆನಪಿರಲಿ ಪ್ರೇಮ್ ಅವರ ಮಗಳು ಅಮೃತಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಂದಿದ್ದು, ಅಮೃತಾ ತನ್ನ ಪರೀಕ್ಷೆಯಲ್ಲಿ ಶೇ. 91 ಅಂಕ ಪಡೆದಿದ್ದಾರೆ.
ಈ ಕುಶಿಯನ್ನು ಪ್ರೇಮ್ ತಮ್ಮ ಟ್ವಿಟ್ಟರಿನಲ್ಲಿ, “ಹಾಯ್ ಎಲ್ಲರಿಗೂ. ನನ್ನ ಮಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.91 ಅಂಕ ಪಡೆದಿದ್ದಾಳೆ. ನನ್ನ ಮಗ 8ನೇ ತರಗತಿಯಲ್ಲಿ ಮೂರನೇ ರ್‍ಯಾಂಕ್ ಪಡೆದಿದ್ದಾನೆ” ಎಂದು ಟ್ವೀಟ್ ಮಾಡಿದ್ದಾರೆ.