ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಮಾರ್ಚ್ 3 ರಂದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅವರು ಬಿಜೆಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂಬ ಮಾತುಗಳೂ ಸಹ ಕೇಳಿ ಬರುತ್ತಿದ್ದವು.
ಇದೀಗ ರವೀಂದ್ರ ಜಡೇಜಾ ಅವರ ತಂದೆ ಅನಿರುದ್ಧ್ ಸಿನ್ಹ್ ಜಡೇಜಾ ಹಾಗೂ ಅವರ ಸಹೋದರಿ ನೈನಾಬಾ ಜಡೇಜಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಗುಜರಾತ್ ನ ಜಾಮ್ ನಗರ ಜಿಲ್ಲೆಯ ಕಲವಾಡ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಟಿದಾರ್ ಮೀಸಲಾತಿ ಹೋರಾಟಗಾರ ಹಾಗೂ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ಇವರುಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.