ಸೂಕ್ತ ಸಾಕ್ಷ್ಯಾಧಾರ ಲಭ್ಯವಾಗದ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ವಿಚಾರದ ತನಿಖೆಯನ್ನು ಆದಾಯ ತೆರಿಗೆ ಇಲಾಖೆ ಕೈಬಿಟ್ಟಿದೆ. ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮೂವರು ಶಾಸಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಐಟಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸಮನ್ಸ್ ನೀಡಲಾಗಿತ್ತು.
ಇಬ್ಬರನ್ನು ಕರೆಸಿ ವಿಚಾರಣೆ ಮಾಡಲಾಗಿದ್ದು, ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ. ಸೂಕ್ತ ಸಾಕ್ಷಿ ಸಿಕ್ಕರೆ ತನಿಖೆ ಮಾಡಲಾಗುವುದು ಎಂದು ಐಟಿ ಇಲಾಖೆ ಡಿಜಿ ಬಾಲಕೃಷ್ಣ ಹೇಳಿದ್ದಾರೆ.