ಕಳೆದ ಒಂದು ವಾರದಿಂದಲೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಡ್ಯದಲ್ಲೇ ಬೀಡುಬಿಟ್ಟಿದ್ದರು,
ಮಂಡ್ಯದಲ್ಲಿ ನಟಿ ಸುಮಲತಾ ಅಂಬರೀಶ್ ಅವರು ಗೆಲ್ತಾರೆ ಎಂಬುದು ಗೊತ್ತಾಗಿ ಎಚ್ ಡಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ
ಅವರಿಗೆ ಏನು ಮಾತನಾಡಬೇಕು ಎಂಬುದೂ ಗೊತ್ತಾಗುತ್ತಿಲ್ಲ ಅವರಿಗೆ ಭಯವಾಗುತ್ತಿದೆ ಎಂದು ಯಡಿಯೂರಪ್ಪ ಲೇವಡಿ ಮಡುವ ಮೂಲಕ ಹೇಳಿಕೆಯನ್ನು ನೀಡಿದ್ದಾರೆ.
ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲೂ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದೆವು, ಈ ಲೋಕಸಭೆ ಚುನಾವಣೆಯಲ್ಲು ಉತ್ತಮ ಪ್ರದರ್ಶನ ತೋರುತ್ತೇವೆ ಈ ಚುನಾವನೆಯಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಹಾಗೂ ಶಿವಮೊಗ್ಗದಲ್ಲಿ ಹೆಚ್ಚಿನ ಅಂತರದಲ್ಲೇ ಗೆಲುವು ಸಾಧಿಸಲಿದ್ದೇವೆ ಎಂದು ಯಡಿಯುರಪ್ಪ ಹೇಳಿದ್ದಾರೆ.