ಸಿದ್ದರಾಮಯ್ಯ ಸಿಎಂ ಆಗೋ ವಿಚಾರ ಇದೀಗ ದಿನದಿಂದ ದಿನಕ್ಕೆ ಚರ್ಚೆಗೆ ಗ್ರಾಸವಾಗುತ್ತಿದೆ, ಸಿದ್ದರಾಮಯ್ಯ, ಕುಮಾರಸ್ವಾಮಿ, ಈಶ್ವರಪ್ಪ ಬಳಿಕ ಇದೀಗ ಜಮೀರ್ ಅಹಮದ್ ಖಾನ್ ಹೇಳಿಕೆಯನ್ನು ನೀಡಿದ್ದಾರೆ.

ಇಡೀ ಕರ್ನಾಟಕದ ಜನ ಸಿದ್ದರಾಮಯ್ಯ ಅವರನ್ನೇ ಸಿಎಂ ಆಗಿ ನೋಡಲು ಬಯಸಿದ್ದಾರೆ, ನಾವೂ ಕೂಡ ಅವರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.

ನಿನ್ನೆ ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂದು ಹೇಳಿಕೆ ನೀಡಿದ ವಿಚಾರವಾಗಿ ನಗರದಲ್ಲಿಂದು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್, ರಾಜ್ಯದ ಜನ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು ಎಂದು ಬಯಸುತ್ತಿದ್ದಾರೆ.

ಆದ್ರೆ ಅದು ಈಗ ಅಲ್ಲ, ಈಗ ಸಮ್ಮಿಶ್ರ ಸರ್ಕಾರವಿದೆ, ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರ್ತಾರೆ. ಮುಂದಿನ ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎಂದು ಹೇಳುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ.






