ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಾದ್ಯಮದ ಮುಂದೆ ಮಾತನಾಡಿದ ಮುಖ್ಯಮತ್ರಿ ಕುಮಾರಸ್ವಾಮಿ ದರ್ಶನ್ ಮತ್ತು ಯಶ್ ಅವರಿಗೆ ವಾರ್ನ್ ಕೋಡುವ ರೀತಿ ಮಾತನಾಡಿದ್ದಾರೆ.
ಮಂಡ್ಯದಲ್ಲಿ ನಮ್ಮ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಬಾರದೆಂದು ಏನೆಲ್ಲಾ ಷಡ್ಯಂತ್ರ ಮಾಡಲಾಗಿದೆ ಎನ್ನುವುದನ್ನು ನನಗೆ ಗೊತ್ತಿದೆ.
ಯಾರು ಏನೇ ಹೇಳಲಿ ಏನೇ ಆಗಲಿ ಮಂಡ್ಯದಲ್ಲಿ ನಿಖಿಲ್ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ಸಂರ್ಭದಲ್ಲಿ ದರ್ಶನ್ ಮತ್ತು ಯಶ್ ಬಗ್ಗೆ ಮಾತನಾಡಿದ ಅವರು ಯಾರ ಹಣೆಯಲ್ಲಿ ಏನು ಬರೆದಿದೆಯೋ ಅದೇ ಆಗೋದು, ನನ್ನ ವಿರುದ್ದ ಆರೋಪ ಮಾಡಿರುವ ಚಿತ್ರನಟರಾದ ದರ್ಶನ್ ಮತ್ತು ಯಶ್, ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.