ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ ನಾನೇ ಸಿಎಂ ಆಗ್ತೇನೆ ,ನಾನೇನು ರಾಜಕೀಯ ಸನ್ಯಾಸಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತೆ. ಆಗ ನಾನು ಸಿಎಂ ಆಗಿ ಹತ್ತು ಕೆಜಿ ಅಕ್ಕಿ ಕೊಡುತ್ತೇನೆ ಎಂದಿದ್ದೇನೆ. ಇದರಲ್ಲಿ ತಪ್ಪೇನಿದೆ? ನಾನೇನು ನಾಳೆನೇ ಸಿಎಂ ಆಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಮುಂದೆ ಸಿಎಂ ಆಗುತ್ತೇನೆ ಎಂದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸರ್ಕಾರ ಪತನವಾಗುತ್ತದೆ ಎಂದು ಯಡಿಯೂರಪ್ಪ ಹೇಳುತ್ತಿದ್ದಾರೆ.ಎರಡು ದಿನ ಸಿಎಂ ಆಗಿ ಅಧಿಕಾರದಿಂದ ಕೆಳಗಿಳಿದ್ರು. ಏನೆಲ್ಲಾ ಮಾಡಿದ್ರೂ ಅಧಿಕಾರ ಹಿಡಿಯಲು ವಿಫಲರಾದರು ಅಂತ ಕಿಡಿಕಾತಿದರು.