ಚುನಾವಣೆ ಮುಗಿಯುತ್ತಿದ್ದಂತೆ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2 ನೇ ಪತ್ನಿ ಮತ್ತು ಮಕ್ಕಳ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 2ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ ಹೊರಡಿಸಿದೆ.
2018ರ ಚುನಾವಣಾ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಲಾಗಿದ್ದು, 2ನೇ ಪತ್ನಿ, ಮಕ್ಕಳ ಬಗ್ಗೆ ಉದ್ದೇಶಪೂರ್ವಕವಾಗಿಯೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಮನವಿ ಮಾಡಿದ್ದಾರೆ.
ಎರಡನೇ ಪತ್ನಿ ರಾಧಿಕಾ ಮತ್ತು ಮಗಳು ಶಮಿಕಾ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿ ಇದ್ದು, ಅದನ್ನು ಮರೆಮಾಚಲೆಂದೇ ಅಫಿಡವಿಟ್ ನಲ್ಲಿ ಉದ್ದೇಶಪೂರ್ವಕವಾಗಿ ಉಲ್ಲೇಖಿಸಿಲ್ಲ . ಹೀಗಾಗಿ ತನಿಖಾ ಸಂಸ್ಥೆಗೆ ಪ್ರಕರಣದ ವಿಚಾರಣೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.