ಶಾಸಕರ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಳ್ಳಾರಿಯ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಹೈಕೋರ್ಟ್‍ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಗಣೇಶ್ ಗುಜರಾತ್‍ನ ಸೂರತ್ ಸಮೀಪದಲ್ಲಿ ಇರುವುದು ಪತ್ತೆಯಾಗಿದ್ದರಿಂದ ತಕ್ಷಣವೇ ಕರ್ನಾಟಕದಿಂದ ಒಂದು ತಂಡ ಅಲ್ಲಿಗೆ ತೆರಳಿ ಅವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಯಿತು.
ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರಿಂದ ಸ್ವಇಚ್ಛೆ ಹೇಳಿಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ಹಿಂದೆ ಕೆಳಹಂತದ ನ್ಯಾಯಲಯ ಅವರಿಗೆ ಜಾಮೀನನ್ನು ನಿರಾಕರಿಸಿತ್ತು. ಬಳಿಕ ಇದನ್ನು ಪ್ರಶ್ನಿಸಿ ಹೈಕೋರ್ಟ್‍ನ ಏಕಸದಸ್ಯ ಪೀಠಕ್ಕೆ ಜಾಮೀನು ನೀಡುವಂತೆ ಗಣೇಶ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.