ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿರುವ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಸಂಕಷ್ಟ ಎದುರಾಗಿದೆ.
ಗೌತಮ್ ಗಂಭೀರ್ ಎರಡು ಕಡೆ ಮತದಾರರ ನೋಂದಣಿ ಹೊಂದಿದ್ದಾರೆಂದು ಆಮ್ ಆದ್ಮಿ ಪಕ್ಷ ಆರೋಪಿಸಿದ್ದು, ವೋಟರ್ ಐಡಿಯನ್ನು ಟ್ವಿಟ್ಟರ್ ನಲ್ಲಿ ಪ್ರಕಟಿಸಲಾಗಿದೆಯಲ್ಲದೆ ಪೊಲೀಸರಿಗೂ ದೂರು ನೀಡಲಾಗಿದೆ.
ಈ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿರುವ ಅತೀಷಿ, ಗೌತಮ್ ಗಂಭೀರ್ ನಾಮಪತ್ರ ಸಲ್ಲಿಸುವ ವೇಳೆ ರಾಜೀಂದರ್ ನಗರದಲ್ಲಿ ಮತದಾರರ ನೋಂದಣಿ ಹೊಂದಿರುವುದಾಗಿ ತಿಳಿಸಿದ್ದಾರೆ. ಆದರೆ ಅವರು ಕರೋಲ್ ಬಾಗ್ ನಲ್ಲೂ ಮತದಾರರ ನೋಂದಣಿ ಹೊಂದಿದ್ದು, ಈ ವಿಚಾರವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.