ಒಂದೊಂದು ಸಮೀಕ್ಷೆ ಒಂದೊಂದು ರೀತಿ ಬರುತ್ತಿದೆ. ನನಗೆ ಕಾನ್ಫಿಡೆನ್ಸ್ ಇದೆ ಸಮೀಕ್ಷೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಒಂದೊಂದು ಸಮೀಕ್ಷೆ ಒಬ್ಬೊಬ್ಬರ ಪರವಾಗಿ ಬರುತ್ತದೆ. ಅದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಫಲಿತಾಂಶದ ದಿನವಾದ ಮೇ 23 ವರೆಗೂ ಕಾದು ನೋಡೋಣ. ನನಗೆ ವಿಶ್ವಾಸವಿದೆ. ನಾನು ಯಾವುದೇ ಸರ್ವೆ ಮಾಡಿಸಿಲ್ಲ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ಚೆಲುವರಾಯಸ್ವಾಮಿ ಜೊತೆಗೆ ರಾಜಕೀಯ ಚರ್ಚೆ ನಡೆದಿಲ್ಲ. ಚುನಾವಣೆ ಮುಗಿದಿದೆ. ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿದ್ದರು. ಈಗ ನನಗೆ ವಿಶ್ರಾಂತಿಯ ಸಮಯ ಚುನಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ನಟ ದರ್ಶನ್ ಹೇಳಿಕೆಗೆ ಸುಮಲತಾ ಅಂಬರೀಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ದರ್ಶನ್ ತುಂಬಾ ಒಳ್ಳೆಯ ಮಾತು ಹೇಳಿದ್ದಾರೆ. ನನ್ನ ಮನಸ್ಸಿನಲ್ಲಿರುವುದು ಅದೇ ವಿಚಾರವಾಗಿದೆ. ದರ್ಶನ್ ಹೇಳಿಕೆಯನ್ನು ಪ್ರಶಂಸಿಸಬೇಕು ಎಂದು ತಿಳಿಸಿದ್ದಾರೆ.