ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರಗಳಲ್ಲಿ ಅಡಗಿದೆ. ಮೇ 23 ರಂದು ಫಲಿತಾಂಶ ಹೊರ ಬೀಳಲಿದ್ದು, ಅದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ.
ಕಾಂಗ್ರೆಸ್ ನಾಯಕರು ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಿಗೆ ವರದಿಯೊಂದನ್ನು ಸಲ್ಲಿಸಿದ್ದು, ಅದರ ಪ್ರಕಾರ ಪಕ್ಷ 10 ರಿಂದ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎನ್ನಲಾಗಿದೆ. 7 ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ 50-50 ಇದೆ ಎಂದು ವರದಿ ವಿವರಿಸಿದೆ.
ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳ ಪಟ್ಟಿಯಲ್ಲಿ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಚಿಕ್ಕೋಡಿ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ ಹಾಗೂ ಚಾಮರಾಜನಗರ ಕ್ಷೇತ್ರಗಳಿದ್ದು, ಗೆಲ್ಲುವ ಸಾಧ್ಯತೆ ಇರುವ 50-50 ಪಟ್ಟಿಯಲ್ಲಿ ಮೈಸೂರು, ಧಾರವಾಡ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಿವೆ.ಮೇ 23 ರ ಫಲಿತಾಂಶದ ಬಳಿಕ ಈ ಲೆಕ್ಕಾಚಾರ ಎಷ್ಟರ ಮಟ್ಟಿಗೆ ಸತ್ಯವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.