ಜಿಲ್ಲೆಯಲ್ಲಿ ಬಾಲ್ಯವಿವಾಹವೆಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದೆ. ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗದ್ಲೆಗಾಂವ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಇನ್ನೂ ಬಾಲ್ಯ ವಿವಾಹಗಳು ನಡೆಯುತ್ತಿವೆ ಎಂದು ಕೇಳಲಿಕ್ಕೆ ಆಶ್ಚರ್ಯವಾಗುತ್ತದೆ ಆದರೆ ಕೆಲವು ಹಳ್ಳಿಗಳಲ್ಲಿ ಇನ್ನೂ ಈ ಸಂಸ್ಕೃತಿ ನೆಡೆಯುತ್ತಿದೆ.ಸಂಪೂರ್ಣವಾಗಿ ಬಾಲ್ಯ ವಿವಾಹವನ್ನು ನಿಷೇಧಿಸಲು ಸರ್ಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಡಬೇಕಿದೆ
ಮುಡಬಿ ಠಾಣೆ ಪಿಎಸ್‌ಐ ವಸೀಮ್ ಪಟೇಲ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೆರೆಗೆ ಮದುವೆ ಮಂಟಪದ ಮೇಲೆ ದಾಳಿ ನಡೆಸಿ ಬಾಲಕ, ಬಾಲಕಿಯನ್ನು ರಕ್ಷಿಸಿದ್ದಾರೆ. ಅಲ್ಲದೆ ಮಕ್ಕಳ ಪೋಷಕರಿಂದ ಮುಚ್ಚಳಕೆ ಪತ್ರ ಬರೆಸಿದ್ದಾರೆ.