ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಇಂದು ಮಧ್ಯಾಹ್ನ 12 ಗಂಟೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಮಾರ್ಚ್ 22 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ. ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ.
ಮೇ 1 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
www.kaceb.kar.nic.in, www.karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಈ ಮೊದಲು ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು.ಆದರೆ ಇಂದು ಮಧ್ಯಾಹ್ನವೇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳ ಪೋಷಕರಿಗೆ ಎಸ್.ಎಂ.ಎಸ್. ಸಂದೇಶ ರವಾನಿಸಲಾಗುವುದು.