ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ಈಗ ಸಿನಿಮಾ ರಂಗದಿಂದ ದೂರ ಉಳಿದು ಫುಲ್ಟೈಮ್ ರಾಜಕಾರಣಿಯಾಗಿ ಬ್ಯುಸಿ ಆಗಿದ್ದಾರೆ. ಕಾಂಗ್ರೆಸ್ನ ಸೋಶಿಯಲ್ ಮೀಡಿಯಾ ವಿಂಗ್ ನ ಮುಖ್ಯಸ್ಥೆ ರಮ್ಯಾ ಸದಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವಾಗಿ ಮಾತನಾಡುತ್ತಾ, ಮನಸೋ ಇಚ್ಛೆ ವ್ಯಂಗ್ಯ ಮಾಡಿ ಟ್ವೀಟ್ ಮಾಡುತ್ತಾ ಒಂದಲ್ಲ ಒಂದು ರೀತಿಯಲ್ಲಿ ಸದಾ ಚರ್ಚೆಯಲ್ಲಿರುತ್ತಿದ್ದಾರೆ.
ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ.ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತಾಡೋಕ್ಕೆ ಯಾವುದೇ ನೈತಿಕತೆ ಇಲ್ಲ
ನಾಳೆ ವೀಡಿಯೋ ಮೂಲಕ ಉತ್ತರ ಕೊಡುತ್ತಿನಿ. @divyaspandana pic.twitter.com/UmGlg10fOh— Chowkidar Bullett Prakasha (@BulletPrakash2) April 29, 2019
ಮೋದಿಯನ್ನು ಹಿಟ್ಲರ್ ಗೆ ಹೋಲಿಸಿರುವ ಅವರು, ಸರ್ವಾಧಿಕಾರಿ ಹಿಟ್ಲರ್ ಹಾಗೂ ನರೇಂದ್ರ ಮೋದಿ ಫೋಟೋ ಮರ್ಜ್ ಮಾಡಿ ಟ್ವೀಟ್ ಮಾಡಿದ್ದಾರೆ. ಹಿಟ್ಲರ್ ಮಗುವಿನ ಕೆನ್ನೆ ಚಿವುಟಿ ಮುದ್ದು ಮಾಡುವ ಫೋಟೋ ಮತ್ತು ಮೋದಿಯದ್ದು ಅಂತಹದ್ದೇ ಫೋಟೋ ಕೊಲಾಜ್ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಿ ಅಂತ ಟ್ವೀಟ್ ಮಾಡಿದ್ದಾರೆ. ಇದು ಸಾಕಷ್ಟು ವಿವಾದವನ್ನು ಹುಟ್ಟುಹಾಕಿದೆ,
ನಟ ಬುಲೆಟ್ ಪ್ರಕಾಶ್ ರಮ್ಯಾ ಬಗ್ಗೆ ಕಿಡಿಕಾರಿದ್ದಾರೆ. ರಮ್ಯಾ ಮೇಡಂ (ಪದ್ಮಾವತಿ) ಮಗುವಿನ ವಯಸ್ಸಲ್ಲಿ ನಿಮ್ಮ ತಂದೆ ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನಿಮಗೆ ವಿಶ್ವನಾಯಕ ನರೇಂದ್ರ ಮೋದಿ ಅವರ ಬಗ್ಗೆ ಮಾತಾಡೋಕೆ ಯಾವ್ದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.