ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ. ಇದಕ್ಕೆ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣ ಎಂದು ಹೇಳಲಾಗಿತ್ತು.

ಆದರೆ, ಇದನ್ನು ಸಚಿವ ಹೆಚ್.ಡಿ. ರೇವಣ್ಣ ಅಲ್ಲಗಳೆದಿದ್ದಾರೆ. ಹಾಸನ ಜಿಲ್ಲೆ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ತಮ್ಮ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಅವರು ತಿಳಿಸಿದ್ದಾರೆ.

ರೋಹಿಣಿ ಸಿಂಧೂರಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಪ್ರಶ್ನಿಸಿದ ರೇವಣ್ಣ, ಹಿಂದಿನ ಜಿಲ್ಲಾಧಿಕಾರಿ ಯಾವ ಶಾಲೆಗೆ ಭೇಟಿ ನೀಡಿ ಪಾಠ ಮಾಡಿದ್ದಾರೆ. ಎಷ್ಟು ಸಭೆ ನಡೆಸಿದ್ದಾರೆ ಎಂಬುದನ್ನು ತೋರಿಸಲಿ. ಜಿಲ್ಲೆಯ ಶಿಕ್ಷಕರಿಗೆ ಪರೀಕ್ಷೆ ಮಾಡಲು ಹೋಗಿ ಅವರು ವಿರೋಧ ಕಟ್ಟಿಕೊಂಡಿದ್ದರು.ಭವಾನಿ ರೇವಣ್ಣ ಹಲವಾರು ಬಾರಿ ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದರ ಪರಿಣಾಮ ಮೊದಲ ಸ್ಥಾನ ಬಂದಿದೆ ಎಂದು ತಿಳಿಸಿದ್ದಾರೆ.






