20 ವರ್ಷಗಳ ಸಮೀಕ್ಷೆಯಲ್ಲಿ ಬಯಲಾಯ್ತು ಪುರುಷರು ಕೆಲಸ ಬಿಡುವ ಮಹಾ ಸತ್ಯ…!

Date:

ದಿನಕ್ಕೊಂದಿಷ್ಟು ಸಂಶೋಧನೆಗಳು ನಡೆಯುತ್ತಲೇ ಇರುತ್ತವೆ.‌ಕೆಲವೊಂದು‌ ರಿಸರ್ಚ್ ಗಳು ಹೆಚ್ಚು ಇಂಟ್ರೆಸ್ಟಿಂಗ್ ಆಗಿರುತ್ತವೆ.‌ ಇಂತಹ ಒಂದು ಇಂಟ್ರೆಸ್ಟಿಂಗ್ ರಿಸರ್ಚ್ ಬಗ್ಗೆ ಇಲ್ಲಿದೆ.
ಒಳ್ಳೆಯ ಕೆಲಸದಲ್ಲಿ ಇರಬೇಕು. ಹೆಚ್ಚು ಸಂಬಳ ಪಡೆಯಬೇಕು ಎನ್ನುವುದು ಪ್ರತಿಯೊಬ್ಬರ ಬಯಕೆ. ಆದರೆ, ಪುರಷರು ಈಗ ಮಹಿಳೆಯರ ವಿರುದ್ಧ ತಲೆಬಾಗಿ ಇಂತಹ ಅವಕಾಶಗಳನ್ನು ಕೈ ಚೆಲ್ಲುತ್ತಿದ್ದಾರೆ.
ಇದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. 20 ವರ್ಷಗಳ ಕಾಲ ನಡೆದ ಒಂದು ಸಂಶೋಧನೆಯ ಪ್ರಕಾರ ಪುರುಷರು ಮಹಿಳೆಯರ ವಾಚಾಳಿ ತನದ ಎದುರು ಸ್ಪರ್ಧೆ ಮಾಡಲಾಗದೆ ಅತ್ಯುನ್ನತ ಹುದ್ದೆಗಳಿಗೆ ಹೋಗಲು ಮನಸ್ಸು ಮಾಡುತ್ತಿಲ್ಲ ಎಂದು ತಿಳಿದುಬಂದಿದೆ. ಅದಲ್ಲದೆ ಇದೇ ಕಾರಣದಿಂದ ರಾಜೀನಾಮೆ ಕೊಟ್ಟು ಬರುತ್ತಿದ್ದಾರೆ ಎಂದು ಸಂಶೋಧನಾ ವರದಿ ಪ್ರತಿಪಾದಿಸಿದೆ.‌
ಮಹಿಳಾ ಬಾಸ್ ತಮ್ಮ ಸಹೋದ್ಯೋಗಿಗಳೊಂದಿಗೆ , ಕ್ಲೈಂಟ್ ಗಳೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಂಡು ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಾರೆ ಎಂದು ಕಂಪನಿಗಳು ಮಹಿಳೆಯರನ್ನೇ ಹೆಚ್ಚಾಗಿ ನೇಮಿಸಿಕೊಳ್ಳುತ್ತವೆ ಎಂದು‌ ತಿಳಿದುಬಂದಿದೆ. ಸಾಮಾಜಿಕ ಕೌಶಲ್ಯಕ್ಕೆ ಮನ್ನಣೆ ಹೆಚ್ಚಾಗುತ್ತಾ ಹೋದಂತೆ ಮಹಿಳೆಯ ನೇಮಕ ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ.
ಕಳೆದ 40 ವರ್ಷಗಳಲ್ಲಿ ಅತ್ಯುನ್ನತ ಹುದ್ದೆಗಳಲ್ಲಿ ಮಹಿಳೆಯರ ಪಾಲು ಹೆಚ್ಚಾಗಿದೆ ಎಂದೂ ಕೂಡ ಗೊತ್ತಾಗಿದೆ.
ಯುಬಿಎಸ್ ಸೆಂಟರ್ ಆಫ್ ಎಕನಾಮಿಕ್ಸ್ ಇನ್ ಸೊಸೈಟಿ ಈ ಸಮೀಕ್ಷೆಯನ್ನು ಪ್ರಕಟ ಮಾಡಿದೆ.‌
ಹೀಗೆ ಮಹಿಳೆಯರ ಮುಂದೆ ಪುರಷರು ಸೋಲೊಪ್ಪಿಕೊಳ್ಳುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...