ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಲು ಬಹಳಷ್ಟು ಪ್ರಯತ್ನ ಪಡುತ್ತಿರುವ ಬಿಜೆಪಿಗೆ ಸ್ಥಳೀಯ ಸಿಪಿಎಂ ನಾಯಕರು ಬೆನ್ನಿಗೆ ನಿಂತಿದ್ದಾರೆ ಎಂಬ ಅಚ್ಚರಿಯ ವಿಷಯ ಕೇಳಿ ಬರುತ್ತಿದೆ .
ಸಿಪಿಎಂ ಮತ್ತು ಬಿಜೆಪಿ ಎರಡಕ್ಕೂ ಎದುರಾಳಿಯಾಗಿರುವ ತೃಣಮೂಲ ಕಾಂಗ್ರೆಸ್ ನ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಎಡಪಕ್ಷಕ್ಕೆ ಹೋಲಿಸಿದರೆ ಬಿಜೆಪಿ ಪ್ರಾಬಲ್ಯ ತುಂಬ ಕಡಿಮೆ ಇದೆ. ಹೀಗಿದ್ದರೂ ಬಿಜೆಪಿ ಬೆನ್ನಿಗೆ ಸಿಪಿಎಂ ನಿಂತಿರುವುದು ಮಮತಾ ಬ್ಯಾನರ್ಜಿಗೆ ಮುಖಭಂಗ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸ್ಥಳೀಯ ಸಿಪಿಎಂ ಕಾರ್ಯಕರ್ತರು ಬಿಜೆಪಿ ಪರ ಕೆಲಸ ಮಾಡುತ್ತಿರುವುದನ್ನು ಸ್ವತಃ ಮಮತಾ ಬ್ಯಾನರ್ಜಿ ಅವರೇ ಪ್ರಚಾರದ ವೇಳೆ ಹೇಳಿಕೊಂಡಿದ್ದು, ಈ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಿದ್ದಾರೆ.ನಮ್ಮ ವಿರೋಧಿಗಳು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಎಚ್ಚರಿಕೆಯಿಂದ ಇರಿ ಎಂದು ಪ್ರಚಾರದ ವೇಳೆ ತಿಳಿಸಿದ್ದಾರೆ.