ಫ್ಲೈಓವರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ನರಸಿಂಹಮೂರ್ತಿ(28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕಾಮಾಕ್ಷಿಪಾಳ್ಯದ ವರ್ಕ್‍ಶಾಪ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಯಾವುದೋ ವಿಚಾರವಾಗಿ ಮನನೊಂದಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಮನೆಯಿಂದ ಹೊರಗೆ ಹೋಗಿದ್ದ ನರಸಿಂಹಮೂರ್ತಿ ಗೊರಗುಂಟೆ ಪಾಳ್ಯದ ಫ್ಲೈಓವರ್‍ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸಪ್ತಗಿರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಪೀಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.