‘ಕೈಗೆ ಬಳೆ ತೊಟ್ಕೊಳಿ’ ಎಂದ ಶೋಭಾ ಮಾತಿಗೇ ಸಿದ್ದು ಎನ್‌ ಹೇಳಿದ್ರು ಗೊತ್ತಾ ..?

Date:

ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಕಿಡಿಕಾರಿದ್ದಾರೆ.

ಕುಮಾರಿ ಶೋಭಾಕರಂದ್ಲಾಜೆ ಅವರೇ ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮ ರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ, ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೇ ಸಾಧನೆಯ ಉತ್ತುಂಗಕ್ಕೇರಿದವರು ಎಂದು ತಿರುಗೇಟು ನೀಡಿದ್ದಾರೆ.ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ್ದ ಶೋಭಾ ಕರಂದ್ಲಾಜೆ ಅವರು ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ ಅವರ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ.

ಅವರು ಬಲಹೀನರು. ಅವರ ಶಾಸಕರನ್ನು ಸಮಾಧಾನ ಪಡಿಸುವ ಕೆಲಸ ಸಿದ್ದರಾಮಯ್ಯನವರದು. ಆ ಕೆಲಸ ಸಾಧ್ಯವಾಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ನವರು ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ಅವರು ತಮ್ಮನ್ನು ತಾವು ದೇವರಾಜ ಅರಸು ಅವರಿಗೆ ಹೋಲಿಸಿಕೊಳ್ಳುತ್ತಿದ್ದಾರೆ. ಅರಸು ಅವರಿಗೆ ಹೋಲಿಸಿಕೊಳ್ಳುವ ನೈತಿಕತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ಕೈ ಲಾಗದವರು ಮೈ ಪರಚಿಕೊಂಡರು ಎನ್ನುವ ಸ್ಥಿತಿಯಲ್ಲಿ ಸಿದ್ದರಾಮಯ್ಯನವರಿದ್ದಾರೆ ಪ್ಯಾಕೇಜ್‍ಗೆ ಡೀಲ್ ಆಗುವ ದರಿದ್ರ ಜಾದವ್ ಕುಟುಂಬಕ್ಕೆ ಬಂದಿಲ್ಲ. ಸೋಲಿನ ಭೀತಿಯಿಂದ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

ಯಡಿಯೂರಪ್ಪನವರು ತಾವು ಮುಖ್ಯಮಂತ್ರಿ ಆಗ್ತೀನಿ ಅಂತಾ ಎಲ್ಲಿಯು ಹೇಳಿಲ್ಲ, ಅದನ್ನ ಹೇಳುತ್ತಿರುವುದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕಾಗಿ ಅವರ ಶಾಸಕರನ್ನ ಛೂ ಬಿಡುತ್ತಿದ್ದಾರೆ ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...