ಧೋನಿ ಅಭಿಮಾನಿಗಳ ಪಾಲಿಗೆ ಶುಭಸುದ್ಧಿ..!

Date:

ಐಸಿಸಿ ಏಕದಿನ ವಿಶ್ವಕಪ್ ಬಳಿಕ ಎಂ.ಎಸ್.ಧೋನಿ ನಿವೃತ್ತಿ ಪಡೆಯಲಿದ್ದಾರೆ. ಇನ್ನು ಮುಂದೆ ಅವರು ಆಡೋದಿಲ್ಲ ಇದು ಅವರ ಕೊನೆ ಐಪಿಎಲ್ ಆಗಿತ್ತು ಎನ್ನುವ ಸುದ್ದಿ ಎಲ್ಲೆಡೆ ಹಬ್ಬಿದೆ. ಆದರೆ ಧೋನಿ ಅಭಿಮಾನಿಗಳಿಗೆ ಚೆನ್ನೈ ಸೂಪರ್ ಕಿಂಗ್ಸ್’ನ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿ (ಸಿಇಒ) ಕಾಶಿ ವಿಶ್ವನಾಥನ್ ಸಿಹಿ ಸುದ್ದಿ ನೀಡಿದ್ದಾರೆ.


ಧೋನಿ 2020ರ ಐಪಿಎಲ್’ನಲ್ಲಿ ಚೆನ್ನೈ ತಂಡದಲ್ಲಿ ಆಡಲಿದ್ದಾರೆ ಎಂದು ಅವರು ಮಾಧ್ಯಮವೊಂದಕ್ಕೆ ನೀಡುವ ಸಂದರ್ಶನದಲ್ಲಿ ತಿಳಿಸಿದ್ರು. ಧೋನಿ ಮುಂದಿನ ವರ್ಷ ಐಪಿಎಲ್’ನಲ್ಲಿ ಆಡಲಿದ್ದಾರೆ ಎನ್ನುವ ನಂಬಿಕೆ ನನಗಿದೆ. ಕಳೆದ 2 ವರ್ಷದಿಂದ ಅವರ ಬ್ಯಾಟಿಂಗ್ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಹಲವರು ಅವರನ್ನು ಟೀಕಿಸುತ್ತಿದ್ದಾರೆ. ಆದರೆ ಅಂಕಿ-ಅಂಶಗಳನ್ನು ನೋಡಿದಾಗ ಧೋನಿ ಆಟ ಉತ್ತಮವಾಗಿದೆ. 2018ರಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಧೋನಿ, ಈ ವರ್ಷವೂ ಮಿಂಚಿನ ಆಟವಾಡಿದರು. ವಿಶ್ವಕಪ್’ನಲ್ಲಿ ಅವರ ಪಾತ್ರ ಪಮುಖವೆನಿಸಲಿದೆ. ಧೋನಿ ಬಗ್ಗೆ ನನಗೆ ಗೊತ್ತಿದೆ. ಅವರು ಮುಂದಿನ ವರ್ಷ ಖಂಡಿತವಾಗಿಯೂ ಐಪಿಎಲ್’ನಲ್ಲಿ ಆಡಲಿದ್ದಾರೆ’ ಎಂದು ವಿಶ್ವನಾಥನ್ ಹೇಳುವ ಮೂಲಕ ಎಂಎಸ್ ಡಿ ಕೋಟ್ಯಾಂತರ ಅಭಿಮಾನಿಗಳ ಪಾಲಿಗೆ ಸಿಹಿ ಸುದ್ಧಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...