ಅಧಿಕ ಸಂಖ್ಯೆಯಲ್ಲಿ ಲಿಂಗಾಯತ ಸಂಸದರಿದ್ದರೂ, ಒಬ್ಬ ಸಂಸದರನ್ನೂ ಮಂತ್ರಿ ಮಾಡದ ಯಡಿಯೂರಪ್ಪನವರಿಗೆ ಲಿಂಗಾಯತರು ಮಾನ್ಯತೆ ನೀಡುತ್ತಿಲ್ಲ ಎಂದು ಸಚಿವ ಆರ್.ವಿ.ತಿಮ್ಮಾಪೂರ್ ಹೇಳಿದ್ದಾರೆ.
ವೀರಶೈವ ಲಿಂಗಾಯತರು ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ ಎಂದು ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿಯಲ್ಲಿ ಮೊದಲಿನ ಮಾನ್ಯತೆ ಸಿಗುತ್ತಿಲ್ಲ. ಈಗ ಲಿಂಗಾಯತರು ಅವರ ಬೆನ್ನ ಹಿಂದೆ ಇಲ್ಲ. ಯಡಿಯೂರಪ್ಪಗೆ ವಯಸ್ಸಾಯಿತು.
ನಮ್ಮ ಹಿತ ಕಾಯಲು ಸಾಧ್ಯವಿಲ್ಲ ಎಂದು ಗೊತ್ತಾಗಿದೆ ಹಾಗಾಗಿ ವೀರಶೈವ ಲಿಂಗಾಯತ ಕಾಂಗ್ರೆಸ್ ಪರವಾಗಿದೆ ಎಂದರು. ಮೇ 23ರ ನಂತರ ಕೇಂದ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ತಿಳಿದರು.ಎಚ್.ಡಿ.ರೇವಣ್ಣ ಸಿಎಂ ಆಗಲು ಅರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವುದೋ ಸಂದರ್ಭದಲ್ಲಿ ಆ ರೀತಿ ಹೇಳಿರಬಹುದು. ಆದರೆ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿ ಎಂದರು.